ಕರ್ನಾಟಕ

karnataka

By

Published : Oct 10, 2020, 2:59 AM IST

ETV Bharat / state

ಅಕ್ರಮ ಗೋ ಸಾಗಾಟ ತಡೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ತಡೆಯುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್‌ ರಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

32-check-post-to-control-illegal-cow-transport-in-mangaluru
ಪೊಲೀಸ್ ಆಯುಕ್ತ ವಿಕಾಸ್ ಕುಮಾರ್

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ತಡೆಯುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್‌ ರಚಿಸಲು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಆಯುಕ್ತರ ಸೂಚನೆ

ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೇಕು.‌ ಆಯಾ ಠಾಣಾ ವ್ಯಾಪ್ತಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ಕಡ್ಡಾಯವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಬೇಕು. ಯಾವುದೇ ಕಾರಣಕ್ಕೂ ಸಿಬ್ಬಂದಿ ಕೊರತೆಯ ನೆಪ ಹೇಳುವಂತಿಲ್ಲ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಆಯುಕ್ತರ ಸೂಚನೆ

ABOUT THE AUTHOR

...view details