ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34 ವರ್ಷದ ಕೊರೊನಾ ಸೋಂಕಿತ ಯುವಕ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನು ನಾಲ್ಕು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದ.ಕ ಜಿಲ್ಲೆಯಲ್ಲಿ 34 ವರ್ಷದ ಕೊರೊನಾ ಸೋಂಕಿತ ಗುಣಮುಖ: ನಾಲ್ವರಿಗೆ ನಡೆಯುತ್ತಿದೆ ಚಿಕಿತ್ಸೆ
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 34 ವರ್ಷದ ಯುವಕ ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದಾನೆ. ಇನ್ನು ನಾಲ್ಕು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 34 ವರ್ಷದ ಯುವಕ ಮಾ.18 ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದರು. ಅನಾರೋಗ್ಯ ಹಿನ್ನೆಲೆ ಮಾ. 28 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.31 ರಂದು ಕೋವಿಡ್ 19 ತಗುಲಿರುವುದು ದೃಢಪಟ್ಟಿತ್ತು. ಎ.11 ಮತ್ತು 12 ರಂದು ಗಂಟಲು ದ್ರವವನ್ನು ಮರು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ ನೆಗೆಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಗುಣಮುಖ ಎಂದು ಘೋಷಿಸಿ ಯುವಕನನ್ನು ಡಿಸ್ಚಾರ್ಜ್ ಮಾಡಲಾಗಿದೆ. ಮಂಗಳೂರಿನಲ್ಲಿ ಒಟ್ಟು 12 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಇದರಲ್ಲಿ 8 ಮಂದಿ ಗುಣಮುಖರಾಗಿದ್ದಾರೆ. ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ.