ಮಂಗಳೂರು: 'ತೌಕ್ತೆ' ಚಂಡಮಾರುತ ಪರಿಣಾಮ ದ.ಕ. ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆ ಸುರಿದಿದೆ. ಈ ಹಿನ್ನೆಲೆ ಪ್ರಾಕೃತಿಕ ವಿಕೋಪದ ಪರಿಣಾಮ ಜಿಲ್ಲಾಡಳಿತ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 380 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.
ಭಾರಿ ಗಾಳಿ, ಮಳೆ: ದ.ಕ. ಜಿಲ್ಲೆಯಲ್ಲಿ 380 ಜನರು ಸುರಕ್ಷಿತ ಸ್ಥಳಕ್ಕೆ - ಚಂಡಮಾರುತ
'ತೌಕ್ತೆ' ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 380 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
manglore
ಮಳೆ ಗಾಳಿಯ ಪರಿಣಾಮ 28 ಪ್ರದೇಶಗಳಲ್ಲಿ ಹಾನಿ ಉಂಟಾಗಿದೆ. 84 ಕುಟುಂಬಗಳಿಗೆ ತೊಂದರೆಯಾಗಿದೆ. 14 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಹಾಗೂ 108 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಕೃಷಿಯೇತರ ಚಟುವಟಿಕೆ ಹಾಗೂ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 18 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.