ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 13 ವರ್ಷದ ಬಾಲಕಿ ಸಹಿತ ಐವರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇವರು 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.
ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 130 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 17 ಜನರಲ್ಲಿ ಸೋಂಕು ದೃಢಗೊಂಡಿದ್ದು, 113 ಜನರ ವರದಿ ನೆಗೆಟಿವ್ ಬಂದಿದೆ. 21 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 11 ಮಂದಿ ಮೇಲೆ ನಿಗಾವಹಿಸಲಾಗಿದೆ. ಮಂಗಳೂರಿನ ಇಎಸ್ಐ ಹಾಸ್ಪಿಟಲ್, ಸುರತ್ಕಲ್ ನ ಎನ್ಐಟಿಕೆ ಹಾಗೂ ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ ನಲ್ಲಿ ಯಾರೂ ಇಲ್ಲ.