ಉಳ್ಳಾಲ: ಪಾಳುಬಿದ್ದ ಗದ್ದೆಗಳಲ್ಲಿ ಕೃಷಿ ಕಾರ್ಯ ನಡೆಸುವ ಮುಖೇನ ಗ್ರಾಮಸ್ಥರ ನೆರವಿಗೆ ನಿಂತ ಆಗ್ನೇಸ್ ತಂಡ ಇದೀಗ ಕೋವಿಡ್-19 ಸಂಕಷ್ಟಕ್ಕೆ ಒಳಗಾದವರಿಗೆ ಸ್ಪಂದಿಸಿರುವುದು ಶ್ಲಾಘನೀಯ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಹೇಳಿದರು.
ಸಂತ ಆಗ್ನೇಸ್ ಸಮುದಾಯದತ್ತ ಕಾಲೇಜು ವತಿಯಿಂದ ಸೋಮೇಶ್ವರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುನ್ನೂರು, ಅಂಬ್ಲಮೊಗರು, ಹರೇಕಳ ಗ್ರಾಮದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ನೀಡಲಾದ 500 ಆಹಾರ ಪದಾರ್ಥಗಳ ಕಿಟ್ಗಳನ್ನು ಕುತ್ತಾರು ದುರ್ಗಾ ವಾಹಿನಿ ಮಹಿಳಾ ಮಂಡಲ ಕಟ್ಟಡದಲ್ಲಿ ವಿತರಿಸಿ ಮಾತನಾಡಿದ ಅವರು, ಕೋವಿಡ್-19 ಕಾರ್ಯಾಚರಣೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದರು.