ಕರ್ನಾಟಕ

karnataka

By

Published : Oct 23, 2020, 12:21 PM IST

ETV Bharat / state

ನಾಳೆ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಧಂತಿ ಸಮಾರಂಭ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಸಮಾರಂಭ ನಾಳೆ ಸರಳವಾಗಿ ನಡೆಯಲಿದೆ.

53rd anniversary of Virendra Hegde's pattabhisheka at Dharmasthala tomorrow
ನಾಳೆ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಧಂತಿ ಸಮಾರಂಭ

ಬೆಳ್ತಂಗಡಿ (ದಕ್ಷಿಣಕನ್ನಡ):ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಸಮಾರಂಭ ಅಕ್ಟೋಬರ್ 24ರಂದು ಸರಳವಾಗಿ ಜರುಗಲಿದೆ.

ಹಿಂದೆ ವೀರೇಂದ್ರ ಹೆಗ್ಗಡೆಯವರಿಗೆ ಪಟ್ಟಾಭಿಷೇಕ ಮಾಡಿದ್ದ ಕ್ಷಣ

1948 ನವೆಂಬರ್ 25ರಂದು ಜನಿಸಿದ ಹೆಗ್ಗೆಡೆಯವರು, ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017 ಅಕ್ಟೋಬರ್ 24ಕ್ಕೆ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 50 ವರ್ಷಗಳ ಸಂಭ್ರಮಾಚಾರಣೆಯ ಪ್ರಯುಕ್ತ 2018ರ ಅ. 24ರವರೆಗೆ ಒಂದು ವರ್ಷ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ 'ಸುವರ್ಣ ಮಹೋತ್ಸವ' ಆಚರಿಸಲಾಯಿತು. ಅನೇಕ ಮೌಲಿಕ ಕೃತಿಗಳ ಜೊತೆಗೆ 'ಧರ್ಮಯಾನ' ಎಂಬ ಅಭಿನಂದನಾ ಗ್ರಂಥ ಪ್ರಕಟಿಸಲಾಗಿದೆ.

ಬಾಲ್ಯ ಮತ್ತು ಶಿಕ್ಷಣ:ಕೀರ್ತಿಶೇಷ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಮಗನಾಗಿ ವೀರೇಂದ್ರ ಕುಮಾರ್ 1948ರ ನವಂಬರ್ 25 ರಂದು ಜನಿಸಿದರು. ಇವರಿಗೆ ಮೂವರು ಸಹೋದರರು ಹಾಗೂ ಓರ್ವ ಸಹೋದರಿ ಇದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಬಂಟ್ವಾಳದಲ್ಲಿ ಮುಗಿಸಿದ ಅವರು, ಉಜಿರೆಯಲ್ಲಿ ಸಿದ್ಧವನ ಗುರುಕುಲದಲ್ಲಿ ಪ್ರೌಢ ಶಾಲಾ ಶಿಕ್ಷಣ ಹಾಗೂ ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪೂರೈಸಿದರು.

ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರನ್ನ ಪ್ರಧಾನಿ ಭೇಟಿಯಾಗಿದ್ದ ಕ್ಷಣ
ವಿಶೇಷ ಸೇವೆ, ಸಾಧನೆಗಳು:ಧರ್ಮಸ್ಥಳದಲ್ಲಿ 1982ರಲ್ಲಿ ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪ್ರತಿ 12 ವರ್ಷಗಳಿಗೊಮ್ಮೆ ಮೂರು ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಉಜಿರೆ, ಮಂಗಳೂರು, ಬೆಂಗಳೂರು, ಮೈಸೂರು ಹಾಗೂ ಧಾರವಾಡದಲ್ಲಿ ಹಲವು ಶಿಕ್ಷಣ ಸಂಸ್ಥೆಗಳು, ಕಲ್ಯಾಣ ಮಂಟಪಗಳು, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಸೇರಿ ಇತ್ಯಾದಿಗಳನ್ನು ಅನುಷ್ಠಾನಗೊಳಿಸಿದ್ದಾರೆ. ಹೆಗ್ಗಡೆಯವರು ಪ್ರಾರಂಭಿಸಿದ ಮಾದರಿ ಯೋಜನೆಗಳನ್ನು ಸರ್ಕಾರ ಹಾಗೂ ಅನೇಕ ಮಠ-ಮಂದಿರಗಳು ಅನುಷ್ಠಾನಗೊಳಿಸುತ್ತಿವೆ.
ಪ್ರಧಾನಿ ಅಭಿನಂದನೆ:ಧರ್ಮಸ್ಥಳವು ಆದರ್ಶ ಧರ್ಮಕ್ಷೇತ್ರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದ್ದಾರೆ.

ABOUT THE AUTHOR

...view details