ಮಂಗಳೂರು:ಬೀದಿಬದಿ ವ್ಯಾಪಾರಸ್ಥರಿಗೆ ಆತ್ಮ ನಿರ್ಭರ ಯೋಜನೆಯ ಪ್ರಧಾನಮಂತ್ರಿ ಸ್ವನಿಧಿಯಡಿಯಲ್ಲಿ ಕಿರು ಸಾಲ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲ ಹಂತದಲ್ಲಿ 592 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹೇಳಿದ್ದಾರೆ.
ಮಂಗಳೂರು ಮನಪಾ ಮಂಗಳಾ ಸಭಾಂಗಣದಲ್ಲಿ ಈ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಸ್ಥರನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ಮೋದಿಯವರು ಸ್ವನಿಧಿಯಡಿಯಲ್ಲಿ ಕಿರು ಸಾಲ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಐದು ಸಾವಿರ ಮಂದಿ ಬೀದಿಬದಿ ವ್ಯಾಪಾರಿಗಳನ್ನು ಈ ಯೋಜನೆಯಡಿ ಗುರುತಿಸಬೇಕೆಂದು ಕೇಂದ್ರ ಸರ್ಕಾರದಿಂದ ಆದೇಶ ಬಂದಿದೆ. ಆದ್ದರಿಂದ ಮೊದಲ ಹಂತದಲ್ಲಿ 592 ಬೀದಿಬದಿ ವ್ಯಾಪಾರಿಗಳೆಂದು ಗುರುತಿಸಿ ಗುರುತಿನ ಚೀಟಿ ನೀಡಲಾಗಿದೆ. ಇದೀಗ ಈ ಯೋಜನೆಯಡಿ 951 ಮಂದಿಯನ್ನು ಗುರುತಿಸಿ ಅವರ ಮಾಹಿತಿಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲಾಗಿದೆ ಎಂದು ಹೇಳಿದರು.