ಕರ್ನಾಟಕ

karnataka

ETV Bharat / state

ಪುತ್ತೂರು ತಾಲೂಕಿನಲ್ಲಿ ಇಂದು 6 ಕೊರೊನಾ ಪಾಸಿಟಿವ್​ ಪ್ರಕರಣ ಪತ್ತೆ - 6 corona positive case Detect

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 4 ಮತ್ತು ಗ್ರಾಮಾಂತರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

puttur
ಪುತ್ತೂರು ತಾಲೂಕಿನಲ್ಲಿ ಒಟ್ಟು 6 ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆ

By

Published : Jul 18, 2020, 3:14 PM IST

ಪುತ್ತೂರು :ಜುಲೈ 18ರಂದು ತಾಲೂಕು ಆರೋಗ್ಯ ಇಲಾಖೆಯ ಬುಲೆಟಿನ್ ಮಾಹಿತಿಯಂತೆ ಪುತ್ತೂರು ತಾಲೂಕಿನಲ್ಲಿ ಒಟ್ಟು 6 ಕೊರೊನಾ ಪಾಸಿಟಿವ್​ ಪ್ರಕರಣ ಪತ್ತೆಯಾಗಿವೆ.

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 4 ಮತ್ತು ಗ್ರಾಮಾಂತರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪುತ್ತೂರು ನಗರಸಭೆ ವ್ಯಾಪ್ತಿಯ ಮೊಟ್ಟೆತ್ತಡ್ಕ ನಿವಾಸಿಯ 30 ವರ್ಷದ ವ್ಯಕ್ತಿ, ಕತ್ತಾರಿನಿಂದ ಬಂದು ಸ್ವದೇಶಕ್ಕೆ ಮರಳಿ ಬೆಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿರುವ ಸಂಪ್ಯ ಉದಯಗಿರಿ 37 ವರ್ಷದ ವ್ಯಕ್ತಿ, ನೆಹರುನಗರದ 25 ವ್ಯಕ್ತಿ, ಕೆಮ್ಮಿಂಜೆ ನಿವಾಸಿಯಾಗಿದ್ದಾರೆ.

ಅಮೆರಿಕಾದಿಂದ ಬಂದು ಪುತ್ತೂರು ಖಾಸಗಿ ಲಾಡ್ಜ್​ನಲ್ಲಿ ಕ್ವಾರಂಟೈನ್‌ನಲ್ಲಿರುವ 64 ವರ್ಷದ ಮಹಿಳೆ ಮತ್ತು ಗ್ರಾಮಾಂತರ ವ್ಯಾಪ್ತಿಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಂತಿಗೋಡು 55 ವರ್ಷದ ವ್ಯಕ್ತಿ ಮತ್ತು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಡಬ ತಾಲೂಕಿನ ಕೊಣೆಮಜಲು ನಿವಾಸಿ 22 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ.

ಮೊಟೆತ್ತಡ್ಕ ಯುವಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ABOUT THE AUTHOR

...view details