ಮಂಗಳೂರು:ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕಾರು ಅರುಣ್ ಕುಮಾರ್ ಪುತ್ತಿಲ ಎಂಬವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.
6 ತಿಂಗಳ ಹಿಂದೆ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಪತ್ತೆ - Mangalore Hit and Run
ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ.
ಆರು ತಿಂಗಳ ಹಿಂದೆ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು: ಪತ್ತೆಹಚ್ಚಿದ ಪೋಲೀಸರು
ರಸ್ತೆಯಲ್ಲಿ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಕಾರು ಪತ್ತೆ ಹಚ್ಚಲು ಅನುವು ಮಾಡಿಕೊಟ್ಟಿದೆ. 2019ರ ಸೆಪ್ಟೆಂಬರ್ 9ರಂದು ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಮಹಿಳೆಗೆ ಡಿಕ್ಕಿ ಹೊಡೆದು ಕಾರು ಪರಾರಿಯಾಗಿತ್ತು. ತೀವ್ರವಾಗಿ ಗಾಯಗೊಂಡ ಮಹಿಳೆ ಸುಮತಿ (48) ಎಂಬವರು ಮೃತಪಟ್ಟಿದ್ದರು.