ಬೆಳ್ತಂಗಡಿ:ತಾಲೂಕಿನ ನಿತ್ಯಾನಂದ ನಗರದಲ್ಲಿರುವ ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರದಲ್ಲಿ 26/03/2020 ರಿಂದ 02/04/2020 ರ ವರೆಗೂ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಸಮಾರಂಭ, ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವ ಬಹಳ ವಿಜೃಂಭಣೆಯಿಂದ ನಡೆಯಲಿರುವುದು ಎಂದು ಜಗದ್ಗುರು ಪೀಠದ ಪೀಠಾಧೀಶರಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.
ಇಂದು ದೇವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ 60ನೇ ವರ್ಷದ ಉತ್ಸವದ ಆಚರಣೆ ಕುರಿತು ತಿಳಿಸಿದರು. 7 ದಿನ ನಡೆಯುವ ಅಹೋರಾತ್ರಿ ಭಜನೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಭಜನಾ ತಂಡಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.