ಕರ್ನಾಟಕ

karnataka

ETV Bharat / state

ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಗಬೇಕು: ಡಾ.ವೈ ಭರತ್ ಶೆಟ್ಟಿ - Independence Day 2020

ಮಂಗಳೂರು ಉತ್ತರ ಮಂಡಲದ ಕಾವೂರಿನಲ್ಲಿರುವ ಭಾಜಪಾ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ.

Surathkal
ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ

By

Published : Aug 16, 2020, 12:22 AM IST

ಸುರತ್ಕಲ್: ಬಡವರಿಗೆ, ರೈತರಿಗೆ, ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಸಿಗುವ ತನಕ ನಾವು ಕೆಲಸ ಮಾಡಬೇಕಿದೆ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿದರು.

ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯವೂ ಸಿಗುವಂತಾಗಬೇಕು: ಡಾ.ವೈ ಭರತ್ ಶೆಟ್ಟಿ

ಮಂಗಳೂರು ಉತ್ತರ ಮಂಡಲದ ಕಾವೂರಿನಲ್ಲಿರುವ ಭಾಜಪಾ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಎಂದರೆ ಕೇವಲ ಬ್ರಿಟಿಷರ ದಾಸ್ಯದಿಂದ ಮುಕ್ತಿ ಮಾತ್ರವಲ್ಲ, ಬಡವರು, ರೈತರು, ಹಿಂದುಳಿದ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾತಂತ್ರ್ಯ ಹೊಂದಬೇಕು. ಪ್ರಧಾನಿ ಮೋದಿಜಿ ಅಧಿಕಾರಕ್ಕೆ ಬಂದು ಆರೇ ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇವತ್ತಿಗೂ ನಮ್ಮಲ್ಲಿ ದೇಶದ ಚಿಂತನೆಯ ವಿರುದ್ಧ ಯೋಚಿಸುವವರು ಇದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಸ್ಥಳೀಯ ಪಾಲಿಕೆ ಸದಸ್ಯ ಲೋಹಿತ್ ಅಮೀನ್, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ABOUT THE AUTHOR

...view details