ಉಜಿರೆಯಲ್ಲಿ ಉದ್ಯಮಿಯೊಬ್ಬರ 8 ವರ್ಷದ ಮಗ ಕಿಡ್ನಾಪ್! - ಬಾಲಕನ ಕಿಡ್ನ್ಯಾಪ್
20:44 December 17
ಆಟವಾಡುತ್ತಿದ್ದ ಬಾಲಕನ ಅಪಹರಣ
ಬೆಳ್ತಂಗಡಿ (ದಕ್ಷಿಣ ಕನ್ನಡ):ಉಜಿರೆ ರಥಬೀದಿ ಸಮೀಪ ಗುರುವಾರ ಸಂಜೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಕಾರಿನಲ್ಲಿ ಬಂದಿದ್ದ ನಾಲ್ವರು ಅಪಹರಿಸಿದ್ದಾರೆ ಎಂಬ ಸುದ್ದಿ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಉಜಿರೆ ಉದ್ಯಮಿಯೊಬ್ಬರ ಪುತ್ರನನ್ನು ಇಂಡಿಕಾ ಕಾರಿನಲ್ಲಿ ಬಂದಿದ್ದರೆನ್ನಲಾದ ನಾಲ್ವರು ಅಪಹರಿಸಿದ್ದಾರೆ ಎನ್ನಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದೆ.
ಅಪಹರಣಕಾರರು ಕಾರನ್ನು ಚಾರ್ಮಾಡಿ ರಸ್ತೆ ಕಡೆ ತಿರುಗಿಸಿದ್ದಾರೆ ಎಂಬ ಮಾಹಿತಿ ಇದ್ದು, ಪೊಲೀಸರು ನಾಕಾಬಂಧಿ ಕೈಗೊಂಡಿದ್ದಾರೆ. ಸಾರ್ವಜನಿಕರೂ ಕೂಡ ಎಚ್ಚೆತ್ತಿದ್ದು ಕೆಲವೆಡೆ ಅವರೂ ಕೂಡ ಪೊಲೀಸರಿಗೆ ಸಹಕಾರಿಯಾಗಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದಾಗ, ಘಟನೆ ನಡೆದಿದೆ ಎಂದು ಮಾಹಿತಿ ಲಭಿಸಿದೆ. ಆದರೆ, ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.