ಮಂಗಳೂರು: ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ದುಡ್ಡು ಮಾಡುವ ದಂಧೆ ನಡೆಸುತ್ತಿರುವುದನ್ನು ಪತ್ತೆ ಹಚ್ಚಿರುವ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಎರಡು ತಿಂಗಳ ಹಸುಗೂಸಿನೊಂದಿಗೆ ಒಂಭತ್ತು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಹಿನ್ನೆಲೆ ಹೆಚ್ಚಿನ ಜನಸಂದಣಿ ಸೇರುವುದರಿಂದ ಈ ಮಕ್ಕಳನ್ನು ಭಿಕ್ಷಾಟನೆಗೆ ಕಳಿಸಲಾಗಿತ್ತು. ಈ ಮಕ್ಕಳಲ್ಲಿ ಎರಡು ತಿಂಗಳ ಹಸಗೂಸಿನೊಂದಿಗೆ ಉಳಿದ ಎಲ್ಲಾ ಮಕ್ಕಳು 7 ವರ್ಷದ ಒಳಗಿನವರು. ಮಾಹಿತಿ ತಿಳಿದ ದ.ಕ ಜಿಲ್ಲಾ ಮಕ್ಕಳ ಅಭಿವೃದ್ಧಿ ಸಮಿತಿ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷರು ಜಂಟಿ ಕಾರ್ಯಾಚರಣೆ ನಡೆಸಿ 9 ಮಕ್ಕಳನ್ನು ರಕ್ಷಿಸಿದ್ದಾರೆ.