ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ 9 ಮಂದಿ ಸಾವು: 258 ಜನರಿಗೆ ಸೋಂಕು ದೃಢ

ಈ ದಿನ ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 344 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Dakshinakannada
Dakshinakannada

By

Published : Oct 3, 2020, 10:42 PM IST

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ.

ಕೊರೊನಾ ಪ್ರಕರಣಗಳು:ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ.

ಗುಣಮುಖ:ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಪರೀಕ್ಷೆ :

ಈವರೆಗೆ 16,8968 ಮಂದಿಗೆ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 14,4949 ಜನರಿಗೆ ನೆಗೆಟಿವ್ ಬಂದಿದೆ.

4361 ಮಾಸ್ಕ್ ಧರಿಸದ ಪ್ರಕರಣಗಳು ದಾಖಲು:ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ ಮಾಡಲಾಗಿದೆ.

ABOUT THE AUTHOR

...view details