ಪುತ್ತೂರು:ತಾಲೂಕಿನಲ್ಲಿಂದು ಇಬ್ಬರು ಕೊರೊನಾ ವಾರಿಯರ್ಸ್ ಸೇರಿದಂತೆ 9 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೊರೊನಾ ವಾರಿಯರ್ಸ್ಗಳಾದ ಪುತ್ತೂರು ಉಪವಿಭಾಗದ ಹಿರಿಯ ಶ್ರೇಣಿಯ ಪೊಲೀಸ್ ಅಧಿಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಓರ್ವ ವೈದ್ಯರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸಾರ್ವಜನಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈವರೆಗೆ ಪುತ್ತೂರು ಮಹಿಳಾ ಠಾಣೆ ಹಾಗೂ ನಗರ ಠಾಣೆಯ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಪುತ್ತೂರು ಉಪ ವಿಭಾಗ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉನ್ನತ ಶ್ರೇಣಿಯ 54 ವರ್ಷದ ಅಧಿಕಾರಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಸದ್ಯ ಐಸೋಲೇಶನ್ ನಲ್ಲಿ ಇರುವುದಾಗಿ ತಿಳಿದುಬಂದಿದೆ.
ಪುತ್ತೂರಿನ ಪ್ರತಿಷ್ಟಿತ ಖಾಸಗಿ ಅಸ್ಪತ್ರೆಯ 65 ವರ್ಷದ ವೈದ್ಯರೊಬ್ಬರಲ್ಲಿಯೂ ಸೋಂಕು ಕಾಣಿಸಿಕೊಂಡಿದ್ದು, ಸದ್ಯ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.