ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಸುಳ್ಯದಲ್ಲಿ ಬಸ್-ಕಾರಿನ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ - kannadanews
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿಯ ಅರಂಬೂರು ಬಳಿ ಕಾರ್ ಮತ್ತು ಕೆಎಸ್ಆರ್ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಸುಳ್ಯ ಸಮೀಪದ ಅರಂಬೂರು ಬಳಿ ರಿಕ್ಷಾವನ್ನು ಓವರ್ ಟೇಕ್ ಮಾಡಲು ಹೋಗಿ ಕಾರು ಹಾಗೂ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಆಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.