ಮಂಗಳೂರು:ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಬಳಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ನಡೆದಿದೆ.
ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ನಂದನ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಂದನ್, ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ಎಂದು ಹೆಸರು ಪಡೆದಿದ್ದ. ಎಸೆಸ್ಸೆಲ್ಸಿಯಲ್ಲಿ ಶೇ. 94ರಷ್ಟು ಅಂಕ ಪಡೆದಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಭೌತಶಾಸ್ತ್ರ ಪರೀಕ್ಷೆ ಬರೆದ ನಂತರ ಭೌತಶಾಸ್ತ್ರ ಪತ್ರಿಕೆ ಕ್ಲಿಷ್ಟವಿತ್ತು. ಹಾಗಾಗಿ ನಿರೀಕ್ಷಿಸಿರುವ ಮಟ್ಟದಲ್ಲಿ ಅಂಕಗಳು ಬರಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.