ಕರ್ನಾಟಕ

karnataka

ETV Bharat / state

ಶಂಕಿತ ಡೆಂಗ್ಯೂ ಮಹಾಮಾರಿಗೆ ಮಂಗಳೂರಿನಲ್ಲಿ ಯುವಕ ಬಲಿ - ಯುವಕ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಐದು ದಿನಗಳ ಅಂತರದಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಇಬ್ಬರು ಸಾವನ್ನಪ್ಪಿದ್ದಾರೆ.

A Boy died by dengue

By

Published : Sep 15, 2019, 9:07 PM IST

ಮಂಗಳೂರು:ಯುವಕನೋರ್ವ ಶಂಕಿತ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ತೊಕ್ಕೊಟ್ಟು, ಭಟ್ನಗರ್ ನಿವಾಸಿ ಹರ್ಷಿತ್ ಗಟ್ಟಿ (23) ಮೃತ ಯುವಕ. ಈತ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ. ಹಾಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಐದು ದಿನಗಳ ಅಂತರದಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ.

ABOUT THE AUTHOR

...view details