ಉಳ್ಳಾಲ: ಚಲಿಸುತ್ತಿದ್ದ ಬಸ್ನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ವಿದ್ಯಾರ್ಥಿಯ ಮಿದುಳು ನಿಷ್ಕ್ರಿಯಗೊಂಡಿದ್ದು, ವಿದ್ಯಾರ್ಥಿಯ ಅಂಗಾಂಗ ದಾನಕ್ಕೆ ಹೆತ್ತವರು ಮುಂದಾಗಿದ್ದಾರೆ.
ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ತ್ಯಾಗರಾಜ್ ಮತ್ತು ಮಮತಾ ಕರ್ಕೇರ ದಂಪತಿ ಪುತ್ರ ಯಶರಾಜ್ (16) ನಗರದ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದರು. ಕಳೆದ ವಾರ ಸೆ.7ರಂದು ಯಶರಾಜ್ ಉಳ್ಳಾಲದಿಂದ ಸಿಟಿ ಬಸ್ನಲ್ಲಿ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ರಾ.ಹೆ.66ರ ಅಡಂ ಕುದ್ರುವಿನಲ್ಲಿ ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದು ತಲೆಗೆ ಗಂಭೀರವಾದ ಗಾಯವಾಗಿತ್ತು.