ಕಡಬ: ಜೀಪ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿಯಾದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ಭಾನುವಾರದಂದು ಸಂಭವಿಸಿದೆ.
ಜೀಪ್,ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ.. 7 ಜನರಿಗೆ ಗಂಭೀರ ಗಾಯ - ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ
ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ 2ನೇ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತ ನಡೆದ ಸ್ಥಳ
ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ನಡುವೆ ಇಚಿಲಂಪಾಡಿಯ 2ನೇ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ರಿಕ್ಷಾ ಹಾಗೂ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.