ಭಟ್ಕಳ:ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ - ಈರುಳ್ಳಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯ
ಭಟ್ಕಳ ತಾಲೂಕಿನ ವೆಂಕಟಾಪುರ ಕುಕ್ಕನೀರ ಕ್ರಾಸ್ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಲಾರಿ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಹುಬ್ಬಳ್ಳಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿ ಹಾಗೂ ಮಂಗಳೂರಿನಿಂದ ಗೋವಾ ಕಡೆ ಹೋಗುತ್ತಿದ್ದ ಮೀನು ಲಾರಿಗಳ ನಡುವೆ ಅಪಘಾತವಾಗಿದ್ದು, ಡಿಕ್ಕಿ ರಭಸಕ್ಕೆ ಎರಡು ಲಾರಿಗಳ ಮುಂಬಾಗ ನಜ್ಜು ಗುಜ್ಜಾಗಿದೆ. ಈರುಳ್ಳಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೀನು ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತನವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭೀಕರ ಅಪಘಾತ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.