ಮಂಗಳೂರು :ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಇಂದು ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಕೋಟಿಚೆನ್ನಯರಿಗೆ ಅವಹೇಳನ.. ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್.. - statement against koti chennaiyya
ಜಗದೀಶ್ ಅಧಿಕಾರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ರಾಜು ಪಿ.ಕೆ ಅವರು ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು..
ಜಗದೀಶ್ ಅಧಿಕಾರಿ ಇತ್ತೀಚೆಗೆ ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಹಾಗೂ ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆ ಸಾಕಷ್ಟು ಜನರಿಂದ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕೆಂಬ ಆಕ್ರೋಶ ಕೇಳಿ ಬಂದಿತ್ತು.
ಅಲ್ಲದೇ ಜಗದೀಶ್ ಅಧಿಕಾರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ರಾಜು ಪಿ.ಕೆ ಅವರು ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ಜಗದೀಶ್ ಅಧಿಕಾರಿ ವಿರುದ್ಧ ದಂಡ ಸಂಹಿತೆ ಕಲಂ 295(ಎ), 505 ಅಡಿಯಲ್ಲಿ ಜಾಮೀನುರಹಿತ ಪ್ರಕರಣ ದಾಖಲಾಗಿದೆ.