ಮಂಗಳೂರು: ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಪುತ್ತೂರಲ್ಲಿ ಹೊಸಬಟ್ಟೆ ಧರಿಸಿ ರೈತ ದಂಪತಿ ಆತ್ಮಹತ್ಯೆ.. ಕಾರಣ ನಿಗೂಢ! - farmer suicide news
ಹೊಸಬಟ್ಟೆ ಧರಿಸಿ ವೃದ್ಧ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಪುತ್ತೂರಲ್ಲಿ ಹೊಸಬಟ್ಟೆ ಧರಿಸಿ ರೈತ ದಂಪತಿ ಆತ್ಮಹತ್ಯೆ.. ಕಾರಣ ನಿಗೂಢ!
ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ (65), ಅವರ ಪತ್ನಿ ಶಾರದಾ (60 ) ಆತ್ಮಹತ್ಯೆ ಮಾಡಿಕೊಂಡವರು. ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು ತಮ್ಮ ಮನೆಯ ಕೊಠಡಿಯಲ್ಲಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮಕ್ಕಳು ಕೋಣೆಯ ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ದಂಪತಿಗಳು ಹೊಸಬಟ್ಟೆ ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Last Updated : Oct 18, 2021, 3:00 PM IST