ಸುಳ್ಯ (ದಕ್ಷಿಣಕನ್ನಡ) : ಆಯತಪ್ಪಿ ನದಿಗೆ ಬಿದ್ದ ಮುಸ್ಲಿಂ ಯುವಕನನ್ನು ಹಿಂದೂ ಯುವಕನೊಬ್ಬ ರಕ್ಷಿಸಿರುವ ಘಟನೆ ಸುಬ್ರಮಣ್ಯ ಸಮೀಪದ ಹರಿಹರಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ.
ಇಲ್ಲಿನ ಸೇತುವೆಯೊಂದರಲ್ಲಿ ಸಿಲುಕಿದ್ದ ಮರವನ್ನು ತೆರವುಗೊಳಿಸುವ ಸಂದರ್ಭ ಕ್ರೈನ್ ಆಪರೇಟರ್ ಶರೀಫ್ ಎಂಬಾತ ಆಯತಪ್ಪಿ ನದಿಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸೋಮಶೇಖರ್ ಕಟ್ಟೆಮನೆ ಎಂಬವರು ತಕ್ಷಣ ನದಿಗೆ ಹಾರಿ ಆ ಯುವಕನನ್ನು ರಕ್ಷಿಸಿದ್ದಾರೆ. ಇವರ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.