ಕರ್ನಾಟಕ

karnataka

ETV Bharat / state

ಮನೆಗೆ ಆಕಸ್ಮಿಕ ಬೆಂಕಿ..ಮನೆಯವರು ಪ್ರಾಣಾಪಾಯದಿಂದ ಪಾರು - ಆಕಸ್ಮಿಕ ಬೆಂಕಿಯಿಂದ ಸುಳ್ಯದಲ್ಲಿ ಹೊತ್ತಿ ಹುರಿದ ಮನೆ

ಸುಳ್ಯದ ಗ್ರಾಮವೊಂದರ ಮನೆಗೆ ಆಕಸ್ಮಿಕ ಬೆಂಕಿ ಹೊತ್ತುಕೊಂಡ ಪರಿಣಾಮ ಮನೆ ಬಹುತೇಕ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

accidental fire
ಮನೆಗೆ ಆಕಸ್ಮಿಕ ಬೆಂಕಿ

By

Published : Apr 8, 2020, 8:34 PM IST

ಸುಳ್ಯ (ದಕ್ಷಿಣ ಕನ್ನಡ): ಸುಳ್ಯದ ಅಜ್ಜಾವರ ಗ್ರಾಮದ ದೊಡ್ಡೇರಿಯ ಮನೆಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡು ಮನೆ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿದೆ. ಇದು ಸರೋಜಿನಿ ಎಂಬುವರಿಗೆ ಸೇರಿದ ಮನೆಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಮನೆಯೊಳಗೆ ಬೆಂಕಿ ಕಾಣಿಸಿಕೊಂಡಾಗ ಒಳಗೆ ಸರೋಜಿನಿ, ಪತಿ ಹಾಗೂ ಇಬ್ಬರು ಮಕ್ಕಳಿದ್ದು ಕೂಡಲೇ ಮನೆಯಿಂದ ಹೊರ ಓಡಿಬಂದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿದ ಸುಳ್ಯ ತಹಶೀಲ್ದಾರ್​​​​​​​​​​​ ಅನಂತ ಶಂಕರ್, ಸುಳ್ಯ ತಾಲೂಕು ಕಂದಾಯ ನಿರೀಕ್ಷಕ ಬಿ. ಕೊರಗಪ್ಪ ಹೆಗ್ಡೆ, ಅಜ್ಜಾವರ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಶರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ವೇಳೆ ಸಂತ್ರಸ್ತರಿಗೆ ಕಂದಾಯ ಇಲಾಖೆ ವತಿಯಿಂದ 50 ಕೆ.ಜಿ ಅಕ್ಕಿ ವಿತರಿಸಲಾಯಿತು.

ABOUT THE AUTHOR

...view details