ಕರ್ನಾಟಕ

karnataka

ETV Bharat / state

ಡಿ.22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ - ಸುಳ್ಯ

ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಬಗ್ಗೆ ಇಂದು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

meeting
ಸಭೆ

By

Published : Dec 3, 2019, 9:44 PM IST

ದಕ್ಷಿಣ ಕನ್ನಡ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ.

ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಅಂಗಾರ, ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಶಾಸಕರು ಸೂಚಿಸಿದರು. ಜೊತೆಗೆ ವಾಸ್ತವ್ಯಕ್ಕೆ ಅವಶ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ, ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಮಧ್ಯಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.

ABOUT THE AUTHOR

...view details