ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಬರಹ ಹಾಕಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶವೇ ಸ್ತಬ್ಧವಾಗಿರುವಾಗ ಈತ ಇನ್ನೇನೋ ಮಾಡಿದ... ಯಡವಟ್ಟಿನಿಂದ ವ್ಯಕ್ತಿ ಪೊಲೀಸ್ ವಶಕ್ಕೆ - ಕೋಮು ಪ್ರಚೋದಕ ಪೋಸ್ಟ್ ಹಾಕಿದಾತ ಪೊಲೀಸ್ ವಶಕ್ಕೆ
ಪೇಸ್ಬುಕ್ ಪೇಜ್ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
![ದೇಶವೇ ಸ್ತಬ್ಧವಾಗಿರುವಾಗ ಈತ ಇನ್ನೇನೋ ಮಾಡಿದ... ಯಡವಟ್ಟಿನಿಂದ ವ್ಯಕ್ತಿ ಪೊಲೀಸ್ ವಶಕ್ಕೆ A man arrested for posting communal Post on Facebook](https://etvbharatimages.akamaized.net/etvbharat/prod-images/768-512-6549973-370-6549973-1585218097180.jpg)
ಕೋಮು ಪ್ರಚೋದಕ ಪೋಸ್ಟ್ ಹಾಕಿದಾತ ಪೊಲೀಸ್ ವಶಕ್ಕೆ
ವಿಟ್ಲ ಕಸಬಾ ಗ್ರಾಮದ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಎಂಬಾತ ಪೇಸ್ಬುಕ್ ಪೇಜ್ನಲ್ಲಿ ಕೋಮು ಪ್ರಚೋದಕ ಬರಹ ಹಾಕಿದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ವಿಟ್ಲ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ದೂರು ನೀಡಿದ್ದರು.