ಕರ್ನಾಟಕ

karnataka

ETV Bharat / state

ಕೊಲೆ ಯತ್ನ ಪ್ರಕರಣ: ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್​ - Mangalore police

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ‌ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ

By

Published : Sep 17, 2019, 9:31 PM IST

ಮಂಗಳೂರು: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ‌ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ತೊಕ್ಕೊಟ್ಟು ಒಳಪೇಟೆ ನಿವಾಸಿ ಕವಿತ್ ಪೂಜಾರಿ(29) ಬಂಧಿತ ಆರೋಪಿ. ಈತನ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ ಮತ್ತು ಡರೋಡೆ ಪ್ರಕರಣ ಸೇರಿದಂತೆ ಸುಮಾರು 6 ಪ್ರಕರಣಗಳು ದಾಖಲಾಗಿವೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷಗಳಿಂದ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಪತ್ತೆಗಾಗಿ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು‌ ಪತ್ತೆ ಹಚ್ಚಿದ ಪೊಲೀಸರು ಬಂಧಿಸಿ, ಮುಂದಿನ ಕ್ರಮಕ್ಕೆ ಠಾಣೆಗೆ ಹಸ್ತಾಂತರಿಸಿದ್ದಾರೆ‌.

ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರ ನಿರ್ದೇಶನದಂತೆ, ಇಲಾಖೆಯ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

ABOUT THE AUTHOR

...view details