ಕರ್ನಾಟಕ

karnataka

ETV Bharat / state

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ... ಮುಂದೇನಾಯ್ತು?

ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಳ್ಳಲೆಂದು ಉಳ್ಳಾಲ ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿದ್ದರು. ಆದರೆ ಕೊನೆಯ ಕ್ಷಣದಲ್ಲಿ ತನ್ನ ನಿರ್ಧಾರ ಬದಲಿಸಿ ಈಜಿ ದಡ ಸೇರಲು ಯತ್ನಿಸಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಮೀನುಗಾರರು ಅವರನ್ನು ರಕ್ಷಿಸಿದ್ದಾರೆ.

Mangalore,ಮಂಗಳೂರು

By

Published : Aug 4, 2019, 9:41 PM IST

ಮಂಗಳೂರು: ವ್ಯಕ್ತಿವೋರ್ವ ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.

ಕಡೂರು ಮೂಲದ ಗಿರೀಶ್ (32) ಆತ್ಮಹತ್ಯೆಗೆ ಯತ್ನಸಿದ ವ್ಯಕ್ತಿ. ಈತ ಆತ್ಮಹತ್ಯೆ ಮಾಡಿಕೊಳ್ಳಲೆಂದು ಉಳ್ಳಾಲ ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿದ್ದ. ಆದರೆ ಕೊನೆಯ ಕ್ಷಣದಲ್ಲಿ ತನ್ನ ನಿರ್ಧಾರ ಬದಲಿಸಿ ಈಜಿ ದಡ ಸೇರಲು ಯತ್ನಿಸಿದ್ದ. ಈ ವೇಳೆ ಅಲ್ಲಿಯೇ ಇದ್ದ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ‌. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಗಿರೀಶ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಿರೀಶ್ ನಗರದ ಉರ್ವ ಸ್ಟೋರ್​ನಲ್ಲಿ‌ ಸಿಯಾಳ ವ್ಯಾಪಾರ ಮಾಡುತ್ತಿದ್ದು, ಅವರ ಪತ್ನಿ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿದ್ದಾರೆ‌.

ABOUT THE AUTHOR

...view details