ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜೀವನದಲ್ಲಿ ಜಿಗುಪ್ಸೆ: ಆತ್ಮಹತ್ಯೆಗೆ ಶರಣಾದ ವ್ಯಕ್ತಿ - ನೂಜಿಬಾಳ್ತಿ
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಶೀನಪ್ಪ ಎಂಬ ವ್ಯಕ್ತಿ ಜೀವನದ ಬಗ್ಗೆ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪೂಜಾರಿ ಮನೆ ಶೀನಪ್ಪಗೌಡ
ಪೂಜಾರಿ ಮನೆ ಶೀನಪ್ಪಗೌಡ (66) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ವ್ಯಕ್ತಿಗೆ ಕುಡಿತದ ಚಟ ತೀವ್ರವಾಗಿದ್ದ ಹಿನ್ನೆಲೆ, ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ರಾತ್ರಿ ಕೊಟ್ಟಿಗೆಯ ಪಕಾಸಿಗೆ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಮಗ ಸುರೇಶ್, ಕಡಬ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.