ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಓರ್ವ ಸಾವು : ಮತ್ತೋರ್ವನಿಗೆ ಗಾಯ

ಚಲಿಸುತ್ತಿದ್ದ ಸಾರಿಗೆ ಬಸ್​ನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

a-man-died-after-falling-from-bus-in-kadaba
ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಓರ್ವ ಸಾವು : ಮತ್ತೋರ್ವನಿಗೆ ಗಾಯ

By ETV Bharat Karnataka Team

Published : Sep 24, 2023, 11:10 PM IST

ಕಡಬ(ದಕ್ಷಿಣಕನ್ನಡ) : ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಡಬದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ ಗೌಡ (63) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಸುಬ್ರಹ್ಮಣ್ಯ ಮಂಗಳೂರು ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮನೆಗೆ ಹೊರಟಿದ್ದ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಕಡಬ ಪೇಟೆಯ ಸಮೀಪದ ತಿರುವಿನಲ್ಲಿ ಬಸ್​ನಿಂದ ರಸ್ತೆಗೆಸೆಯಲ್ಪಟ್ಟಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ಕಡಬ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಬಸ್​ನಿಂದ ಬಿದ್ದು ಕಂಡೆಕ್ಟರ್ ಸಾವು :ಚಲಿಸುತ್ತಿದ್ದ ನಗರ ಸಾರಿಗೆ ಬಸ್​ನಿಂದ ಕಂಡಕ್ಟರ್‌ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದ ಘಟನೆ ಮಂಗಳೂರು ಹೊರವಲಯದ ನಂತೂರಿನಲ್ಲಿ ಕಳೆದ ಆಗಸ್ಟ್​ ತಿಂಗಳಲ್ಲಿ ನಡೆದಿತ್ತು. ಮೃತ ಯುವಕನನ್ನು ಬಾಗಲಕೋಟೆ ಜಿಲ್ಲೆಯ ನಿವಾಸಿ, ಸುರತ್ಕಲ್ ತಡಂಬೈಲ್​​ನಲ್ಲಿ ವಾಸವಿದ್ದ ಈರಯ್ಯ (23) ಎಂದು ಗುರುತಿಸಲಾಗಿತ್ತು. ಇವರು 15 ಸಂಖ್ಯೆಯ ಖಾಸಗಿ ಸಿಟಿ ಬಸ್​ನಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.

ಈ ಖಾಸಗಿ ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗವಾಗಿ ತಿರುವು ಪಡೆಯುತ್ತಿದ್ದಾಗ, ಮುಂಭಾಗದ ಬಾಗಿಲಲ್ಲಿ ನಿಂತಿದ್ದ ನಿರ್ವಾಹಕ ಈರಯ್ಯ ಆಯತಪ್ಪಿ ಕೆಳಕ್ಕೆ ಬಿದ್ದಿದ್ದರು. ತಕ್ಷಣ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ಕಾರಣ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಕದ್ರಿ ಸಂಚಾರಿ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ :ಹಾವೇರಿ : ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

ABOUT THE AUTHOR

...view details