ಸುಳ್ಯ(ದಕ್ಷಿಣ ಕನ್ನಡ):ಕಾರು ಚಾಲನೆ ಮಾಡುತ್ತಿದ್ದ ವೇಳೆ ಹೃದಯಾಘಾತ ಉಂಟಾದ ಪರಿಣಾಮ ವ್ಯಕ್ತಿಯೊಬ್ಬರು ಕಾರಿನಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು - ಸುಳ್ಯ ಪೊಲೀಸ್ ಠಾಣೆ ಸಮೀಪ ಹೃದಾಯಾಘಾತ
ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಸುಳ್ಯ ಪೊಲೀಸ್ ಠಾಣೆ ಸಮೀಪ ಹೃದಾಯಾಘಾತ ಸಂಭವಿಸಿದ್ದು, ಕಾರಿನಲ್ಲೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಮಂಡೆಕೋಲು ನಿವಾಸಿ ಪೋಕರೆ ಕುಂಜಿ (55) ಮೃತಪಟ್ಟ ವ್ಯಕ್ತಿ. ಇಂದು ಮಧ್ಯಾಹ್ನ ಕಾರಿನಲ್ಲಿ ಬರುತ್ತಿದ್ದ ವೇಳೆ ಸುಳ್ಯ ಪೊಲೀಸ್ ಠಾಣೆ ಸಮೀಪ ಕಾರು ಸ್ಕೂಟಿಯೊಂದಕ್ಕೆ ತಾಗಿ ನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಿಂತಿತ್ತು. ಇದನ್ನು ಕಂಡ ಸ್ಥಳೀಯರು ಕಾರಿನ ಬಾಗಿಲು ತೆಗೆದು ನೋಡಿದಾಗ ಕುಂಜಿರವರು ಕಾರಿನ ಸ್ಟೇರಿಂಗ್ ಮೇಲೆ ಬಿದ್ದಿದ್ದರು ಎನ್ನಲಾಗಿದೆ.
ಕೂಡಲೇ ಅಲ್ಲಿದ್ದವರು ಪೋಕರೆ ಕುಂಜಿ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಆ ವೇಳೆಗೆ ಅವರು ಹೃದಾಯಘಾತದಿಂದ ಮೃತಪಟ್ಟಿದ್ದರೆಂದು ತಿಳಿದುಬಂದಿದೆ.