ಕರ್ನಾಟಕ

karnataka

ETV Bharat / state

ತೆಂಗಿನಕಾಯಿ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು - ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ವಿದ್ಯುತ್ ಹರಿದು ಲಿಜೋ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ವ್ಯಕ್ತಿ ಸಾವು
ವ್ಯಕ್ತಿ ಸಾವು

By

Published : May 24, 2021, 2:02 PM IST

ಕಡಬ(ದ.ಕ) : ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಮೇ 24ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಸಮೀಪದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬುವರ ಪುತ್ರ ಲಿಜೋ (35) ಎಂದು ಗುರುತಿಸಲಾಗಿದೆ.

ಲಿಜೋ ಇಂದು ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿದೆ.

ವಿದ್ಯುತ್ ಹರಿದು ಲಿಜೋ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details