ಮಂಗಳೂರು (ದ.ಕ): ಮೂಡಬಿದ್ರೆ ತಾಲೂಕಿನ ಬಡಗಮಿಜಾರು ಎಂಬಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡ ಎಂಬುವರ ಪುತ್ರ ಉಮೇಶ್ ಗೌಡ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಮೂಡಬಿದ್ರೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ - Murder of a stranger
ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಕೊಲೆಗೈದಿದ್ದಾರೆ. ಕೊಲೆಗಾರರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ,
ಮೂಡಬಿದ್ರೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಮರುದಿನ ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.