ಬಂಟ್ವಾಳ ( ದಕ್ಷಿಣಕನ್ನಡ): ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾದ ಬಿಸಿ ರೋಡು ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದ ಉಂಟಾಗಿರುವ ಹೊಂಡದಲ್ಲಿ ಮಳೆಗೆ ನೀರು ನಿಂತಿದ್ದು, ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಇಳಿದು ಈಜಾಟ ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ.
ಬಿಸಿ ರೋಡಿನಿಂದ ಮಾಣಿವರೆಗೆ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಇನ್ನೊಂದೆಡೆ ಪ್ರಯಾಣಿಕರ ವಾಹನಗಳು ಹೊಂಡದಲ್ಲಿ ಸಿಲುಕಿ ಜಖಂಗೊಳ್ಳುತ್ತಿವೆ. ಜೊತೆಗೆ ಇಲ್ಲಿನ ಕಲ್ಲಡ್ಕ ಪೇಟೆಯಲ್ಲೂ ವಾಹನದಟ್ಟಣೆ ಉಂಟಾಗುತ್ತಿದ್ದು,ಇಲ್ಲಿ ಬೃಹತ್ ಫ್ಲೈಓವರ್ ನಿರ್ಮಾಣಕ್ಕೆ ಅಗೆಯಲಾದ ಹೊಂಡ ಮತ್ತಷ್ಟು ಅಗಲವಾಗಿದೆ.