ಕರ್ನಾಟಕ

karnataka

ETV Bharat / state

ಇತ್ತೀಚೆಗಷ್ಟೇ ಮದುವೆಯಾಗಿದ್ದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ!

ಇತ್ತೀಚೆಗಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ನಡೆದಿದೆ.

A person commits suicide in Mangaluru
A person commits suicide in Mangaluru

By

Published : Mar 20, 2023, 4:46 PM IST

ಉಳ್ಳಾಲ (ದಕ್ಷಿಣ ಕನ್ನಡ):ಇಲ್ಲಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಭಾನುವಾರ ಸಂಜೆ ಸಂಭವಿಸಿದೆ.

ಮೃತ ಹರೀಶ್ ಕಳೆದ 10 ವರ್ಷಗಳಿಂದ ಮುಡಿಪುವಿನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಗಾರ್ಡ್​ (ಕಾವಲುಗಾರ) ಆಗಿ ಕೆಲಸ ನಿರ್ವಹಿಸುತ್ತಿದ್ದರು. ವರ್ಷದ ಹಿಂದಷ್ಟೇ ಹರೀಶ್ ಸಿದ್ದಕಟ್ಟೆ-ಸಂಗಬೆಟ್ಟು ಎಂಬಲ್ಲಿಯ ಯುವತಿಯನ್ನು ವಿವಾಹವಾಗಿದ್ದರು. ಇದೀಗ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಮಾ.12 ರಂದು ಮೃತ ಹರೀಶ್, ಕೊಣಾಜೆ ಮುಚ್ಚಿಲಕೋಡಿ ನಿವಾಸಿ, ತನ್ನ (ತಾಯಿಯ ಅಕ್ಕನ ಮಗ) ಸಂಬಂಧಿಯೂ ಆದ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿದ್ದರು. ಈ ವೇಳೆ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ಯಾರೋ ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದನಂತೆ. ಇದಕ್ಕೆ ರಮೇಶನು ಮನೆಗೆ ಬಾ, ಅಲ್ಲಿ ಕುಳಿತುಕೊಂಡು ಮಾತನಾಡುವ ಎಂದು ತಿಳಿ ಹೇಳಿದ್ದರು. ಆ ಮಾತಿನಂತೆ ಹರೀಶ್ ಭಾನುವಾರ ಮನೆಗೆ ಸಹ ಬಂದಿದ್ದರು. ಆದರೆ, ಈ ವೇಳೆ ಇದ್ದಕ್ಕಿಂದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕಂಡು ಗಾಬರಿಯಾದ ಸ್ಥಳೀಯರು ಪೊಲೀಸರಿಗೆ ಸುದ್ದಿ ತಿಳಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು, ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದರು. ಆದರೆ, ಖುದ್ದು ಆಂಬ್ಯುಲೆನ್ಸ್ ಏರಿದ್ದ ಹರೀಶ್ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಹರೀಶನಿಗೆ ತನ್ನ ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ, ಕಿವಿ ಕೇಳದಂತೆ ವರ್ತಿಸುತ್ತಾಳೆ ಅನ್ನುವ ಕೊರಗು ಇತ್ತು. ಇತ್ತೀಚೆಗೆ ಈ ಬಗ್ಗೆ ಸಂಬಂಧಿಕರೊಂದಿಗೆ ತನ್ನ ನೋವು ತೋಡಿಕೊಂಡಿದ್ದ. ಅಲ್ಲದೇ, ನನಗೆ ಮೋಸ ಮಾಡಿ ವಿವಾಹ ಮಾಡಿರುವುದಾಗಿ ಆರೋಪ ಸಹ ಮಾಡಿದ್ದನು. ಆರ್ಥಿಕವಾಗಿ ಯಾವುದೇ ರೀತಿಯ ಸಂಕಷ್ಟ ಇಲ್ಲದ ಹರೀಶ್ ಕುಟುಂಬವು ಇದೇ ತಿಂಗಳ ಒಳಗೆ ಪತ್ನಿಗೆ ಸೀಮಂತ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಆದರೆ, ಇದರ ಮಧ್ಯೆ ಈ ಘಟನೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಸು ಕೊಟ್ಟರೆ ಯುವಕರಿಗೂ ವೃದ್ಧಾಪ್ಯ ವೇತನ‌ ಮಂಜೂರು ಮಾಡಿಸುತ್ತಿದ್ದವನ ಬಂಧನ

ABOUT THE AUTHOR

...view details