ಸುಳ್ಯ: ಇಲ್ಲಿನ ಖಾಸಗಿ ಆಸ್ಪತ್ರೆಯ 4ನೇ ಮಹಡಿಯಿಂದ ಕೆಳಗೆ ಹಾರಿದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಲ್ಲಮೊಗ್ರದ ಸತ್ತಾರ್ ಮೃತ ಯುವಕ ಎಂದು ತಿಳಿದು ಬಂದಿದೆ.
ಸುಳ್ಯ: ಆಸ್ಪತ್ರೆಯ 4ನೇ ಮಹಡಿಯಿಂದ ಏಕಾಏಕಿ ಕೆಳಗೆ ಹಾರಿ ವ್ಯಕ್ತಿ ಆತ್ಮಹತ್ಯೆ - Sullia latest news
ವ್ಯಕ್ತಿಯೊಬ್ಬ ಸುಳ್ಯದ ಖಾಸಗಿ ಆಸ್ಪತ್ರೆಯ 4ನೇ ಮಹಡಿಯಿಂದ ಏಕಾಏಕಿ ಕೆಳಗೆ ಹಾರಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ಸತ್ತಾರ್ ಚಿಕಿತ್ಸೆಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಬಂದಿದ್ದರು. ಇಂದು ಸಂಜೆ ಅವರು ಆಸ್ಪತ್ರೆಯ 4ನೇ ಮಹಡಿಯಿಂದ ಏಕಾಏಕಿ ಕೆಳಗೆ ಹಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗಿದ್ದ ವ್ಯಕ್ತಿ ಅವರನ್ನು ಹಿಡಿದುಕೊಳ್ಳಲು ಯತ್ನಿಸಿದರು. ಆದರೆ, ಅಷ್ಟರಲ್ಲಿ ಆತ ಕೆಳಗೆ ಹಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಗಾಯಗೊಂಡ ಸತ್ತಾರ್ರನ್ನು ಮತ್ತೆ ಆಸ್ಪತ್ರೆಯ ಒಳಗೆ ಕೆರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೆ, ಹೆಚ್ಚು ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.