ಮಂಗಳೂರು:ಪ್ರಕರಣವೊಂದರ ಆರೋಪಿಯಾಗಿ ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧಿತ ಆರೋಪಿ. ಈ ಆರೋಪಿಯನ್ನು ನಿನ್ನೆ ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್! - ಮಂಗಳೂರು ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಸುಮಾರು 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ
ಓದಿ:ಇಂದು ದೇಶದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆಯಲ್ಲಿ ಭಾರಿ ಏರಿಕೆ.. ಮಹಾಮಾರಿಗೆ 441 ಬಲಿ
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 22 ವರ್ಷಗಳಿಂದ ಈ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದರು. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.