ಬೆಳ್ತಂಗಡಿ:ವಿದ್ಯುತ್ ಸಂಪರ್ಕ ಹಾಗೂ ಮೂಲಸೌಕರ್ಯವಿಲ್ಲದ ಇಲ್ಲಿನ ಬಡ ಕುಟುಂಬಕ್ಕೆ ನೆರವಾದ ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ್ ಜನ ಮೆಚ್ಚುಗೆ ಗಳಿಸಿದ್ದಾರೆ.
ಧರ್ಮಸ್ಥಳ ಸಮೀಪದ ನಾರ್ಯ ಎಂಬಲ್ಲಿ ಚಿಕ್ಕ ಮನೆಯೊಂದರಲ್ಲಿ ವೃದ್ಧೆ ಸೇರಿ ನಾಲ್ಕು ಮಕ್ಕಳು ವಾಸವಿದ್ದಾರೆ. ಕಳೆದ ಹಲವು ವರ್ಷಗಳಿಂದ ಅವರ ಮನೆಗೆ ವಿದ್ಯುತ್ ಸಂಪರ್ಕ ಇರಲಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಲಿಲ್ಲ. ಪಂಚಾಯಿತಿ ಸದಸ್ಯ ಸುಧಾಕರ್ ಗಮನಕ್ಕೆ ಬರುತ್ತಿದ್ದಂತೆ ಒಂದೇ ದಿನದಲ್ಲಿ ವಿದ್ಯುತ್ ಹಾಗೂ 1 ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ ಸೌಲಭ್ಯ ಒದಗಿಸಿದ್ದಾರೆ.