ಸುಳ್ಯ (ದ.ಕ): ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸಮೀಪ ಆನೆಕಾರ್ ಎಂಬಲ್ಲಿ ಶಾಲಾ ಬಾಲಕಿಯೊಬ್ಬಳ ಮೇಲೆ ಬೈಕ್‌ನಲ್ಲಿ ಬಂದ ಅಪರಿಚಿತರು ರಾಸಾಯನಿಕ ಸ್ಪ್ರೇ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಬಳಿಕ ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಬೆಳ್ಳಾರೆ ಸಮೀಪದ ರಾಗಿಯಡ್ಕದ ಬಾಲಕಿ ಕುಕ್ಕುಜಡ್ಕ ಶಾಲೆಗೆ ಮಧ್ಯಾಹ್ನ ಬರುತ್ತಿದ್ದಾಗ ಆನೆಕಾರ್ ಎಂಬಲ್ಲಿ ಬೈಕ್‌ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕ ಸ್ಪ್ರೇ ಮಾಡಿದ್ದಾರೆ. ಬಳಿಕ ಬಾಲಕಿ ಪ್ರಜ್ಞೆ ತಪ್ಪಿ ಅಲ್ಲೇ ಕುಸಿದು ಬಿದ್ದಿದ್ದಾಳೆ. ಆ ರಸ್ತೆಯಲ್ಲಿ ಬೇರೆ ವಾಹನ ಬರುವ ಶಬ್ಧ ಕೇಳಿ ಆಕೆಯನ್ನು ಅಲ್ಲಿ ಬಿಟ್ಟು ಅಪರಿಚಿತರು ಪರಾರಿಯಾಗಿದ್ದಾರೆ ಎನ್ನಲಾಗಿದೆ.