ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ವಾರಾಣಸಿ ಫಾರ್ಮ್ ಹೌಸ್ನಲ್ಲಿ ಕೆರೆಯಲ್ಲಿ ಮುಳುಗಿ ಮಂಗಳೂರಿನ ವೈದ್ಯೆ ಮೈಜಿ ಕರೋಲ್ ಫರ್ನಾಂಡಿಸ್ (31) ಸಾವನ್ನಪ್ಪಿದ್ದಾರೆ.
ಕೆರೆಯಲ್ಲಿ ಮುಳುಗಿ ಮಂಗಳೂರಿನ ವೈದ್ಯೆ ಸಾವು! ಮಂಗಳವಾರ ಸಂಜೆ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೊಪ್ಪಳದಲ್ಲಿ ಗಣೇಶ ನಿಮಜ್ಜನ ವೇಳೆ ಡಿಜೆ ಬಂದ್: ಪೊಲೀಸರ ಜೊತೆ ಯುವಕರ ವಾಗ್ವಾದ
ಕೃಷಿ ಅಧ್ಯಯನದ ಬಗ್ಗೆ ಆಸಕ್ತಿಯನ್ನು ಹೊಂದಿದ್ದ ಈಕೆ ಈ ಪ್ರದೇಶಕ್ಕೆ ಅಧ್ಯಯನಕ್ಕೆಂದು ತೆರಳಿದ್ದಾಗಿ ತಿಳಿಸಿದ್ದರು. ಸಂಜೆ ಯಾರೂ ಇಲ್ಲದ ಸಮಯ ಫಾರ್ಮ್ ಹೌಸ್ನಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಆ ವೇಳೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಬಳಿಕ ಮಂಗಳೂರಿನ ಖಾಸಗಿ ಆಸ್ವತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರಿಕ್ಷೀಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.