ಸುಳ್ಯ (ದಕ್ಷಿಣ ಕನ್ನಡ): ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೂಜಿತಾ ಮೃತಪಟ್ಟ ಮಹಿಳೆ. ಪೂಜಿತಾ ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಬೆಳಗ್ಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿಯೇ ಇದ್ದ ಅವರಿಗೆ ಮಧ್ಯಾಹ್ನದ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.