ಬಂಟ್ವಾಳ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಿ.ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು.
ಹಥ್ರಾಸ್ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಎಬಿವಿಪಿಯಿಂದ ಪ್ರತಿಭಟನೆ - ಹಥ್ರಾಸ್ ಘಟನೆ ವಿರುದ್ಧ ಎಬಿವಿಪಿ ಪ್ರತಿಭಟನೆ
ಹಥ್ರಾಸ್ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ವಿರುದ್ಧ ಬಂಟ್ವಾಳದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದ್ದು, ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ವಿಧಿಸಬೇಕು ಎಂದು ಆಗ್ರಹಿಸಿದೆ.

ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ರಾಷ್ಟ್ರಪತಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ನಿವೃತ್ತ ಉಪನ್ಯಾಸಕ ಪ್ರೊ. ನಾರಾಯಣ ಭಂಡಾರಿ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದು ಎಂದರೆ ಕಠಿಣ ಕಾನೂನು ಜಾರಿಯಾಗಬೇಕು ಎಂದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಖಿಲಾಷ್, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ದಿನೇಶ್ ಕೊಯಿಲ, ಸಿದ್ದಕಟ್ಟೆ ಘಟಕದ ಅಧ್ಯಕ್ಷರಾದ ಗುರುಪ್ರಸಾದ್, ಚೇತನ್ ಮುಂತಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.