ಕರ್ನಾಟಕ

karnataka

ETV Bharat / state

ಬೆದ್ರೋಡಿಯಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ - car and a tanker lorry accident news

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟು ಒರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

accident between a car and a tanker lorry
ಅಪಘಾತ

By

Published : Feb 9, 2020, 10:26 AM IST

Updated : Feb 9, 2020, 3:49 PM IST

ಉಪ್ಪಿನಂಗಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ದುರಂತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ

ನೆಲ್ಯಾಡಿಯ ಉದ್ಯಮಿ ಯು.ಪಿ. ವರ್ಗೀಸ್ ಅವರ ಸೊಸೆ, ಕಾಂಚನ ನಿವಾಸಿ ಶಾಜಿ ಎಂಬುವರ ಪತ್ನಿ ಜೈನಿ ಶಾಜಿ (30) ಮತ್ತು ಜಿತಿನ್ ಜೇಕಬ್​ (28) ಮೃತಪಟ್ಟವರು.

ಈ ಅವಘಡದಲ್ಲಿ ಸರ್ವೀನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಉಪ್ಪಿನಂಗಡಿ ಕಡೆ ಸಂಚರಿಸುವಾಗ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Last Updated : Feb 9, 2020, 3:49 PM IST

ABOUT THE AUTHOR

...view details