ಕರ್ನಾಟಕ

karnataka

ETV Bharat / state

ಸರಕು ಸಾಗಣೆ ವಾಹನಗಳ ನಡುವೆ ಡಿಕ್ಕಿ: ಚಾಲಕ ಸಾವು, ಇಬ್ಬರು ಗಂಭೀರ - ರಾಷ್ಟ್ರೀಯ ಹೆದ್ದಾರಿ 75

ಶಿರಾಡಿ ಗ್ರಾಮದ ಉದನೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ಸರಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕನೋರ್ವ ಸಾವನ್ನಪ್ಪಿದ್ದಾನೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Nelyadi
ನೆಲ್ಯಾಡಿ ಅಪಘಾತ

By

Published : Apr 6, 2021, 7:20 AM IST

ನೆಲ್ಯಾಡಿ:ಎರಡು ಸರಕು ವಾಹನಗಳ ನಡುವೆ ಅಪಘಾತ ಸಂಭವಿಸಿ ಚಾಲಕನೋರ್ವ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಉದನೆ ಸಮೀಪ ನಡೆದಿದೆ.

ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಹನೀಫ್(40) ಮೃತಪಟ್ಟ ಚಾಲಕ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರಿನ ಬಿ.ಸಿ ರೋಡ್‌ನಿಂದ ಹಾಸನಕ್ಕೆ ಬೀಡಿ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಚೆನ್ನರಾಯಪಟ್ಟಣದಿಂದ ಮಂಗಳೂರಿಗೆ ಸೀಯಾಳ(ಎಳನೀರು) ಸಾಗಾಟ ಮಾಡುತ್ತಿದ್ದ ವಾಹನದ ನಡುವೆ ಉದನೆ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೀಡಿ ಸಾಗಾಟ ಮಾಡುತ್ತಿದ್ದ ವಾಹನದ ಚಾಲಕ ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಹನೀಫ್ ಸಾವನ್ನಪ್ಪಿದ್ದಾರೆ. ಬಂಟ್ವಾಳ ನಿವಾಸಿಗಳಾದ ಕರೀಂ, ರಫೀಕ್ ಎಂಬವರು ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಹನೀಫ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details