ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು,ಓರ್ವ ಗಾಯಗೊಂಡಿದ್ದಾರೆ.
ಪುದು ಗ್ರಾಮದ ಉನೈಸ್ (27) ಮತ್ತು ದಾವೂದ್ (22) ಮೃತರು. ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನಿಂದ ಫರಂಗಿಪೇಟೆಗೆ ಹೋಗುತ್ತಿದ್ದ ಓಮ್ನಿ ಕಾರು ಅಡ್ಯಾರ್ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.