ಕರ್ನಾಟಕ

karnataka

ETV Bharat / state

ಮಂಗಳೂರಿನ ಪಂಪ್​ವೆಲ್​ ಮೇಲ್ಸೇತುವೆ ಮೇಲೆ ಭೀಕರ ಅಪಘಾತ: ಓರ್ವ ಸಾವು - Mangalore South Traffic Police Station

ಮಂಗಳೂರು ನಗರದ ಪಂಪ್​ವೆಲ್ ಮೇಲ್ಸೇತುವೆ ಮೇಲೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಪಂಪ್​ವೆಲ್ ಮೇಲ್ಸೇತುವೆ ಲೋಕಾರ್ಪಣೆಯಾದ ಬಳಿಕ ಇಲ್ಲಿ ನಡೆದ ಮೊದಲ ಅಪಘಾತ ಇದಾಗಿದೆ.

csdd
ಲೋಕಾರ್ಪಣೆ ಒಂಬತ್ತು ದಿನದಲ್ಲೇ ಪಂಪ್​ವೆಲ್​ ಮೇಲ್ಸೇತುವೆಯಲ್ಲಿ‌ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

By

Published : Feb 8, 2020, 9:17 PM IST

ಮಂಗಳೂರು: ನಗರದ ಪಂಪ್​ವೆಲ್ ಮೇಲ್ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂಪ್​ವೆಲ್​ ಮೇಲ್ಸೇತುವೆಯಲ್ಲಿ‌ ಭೀಕರ ಅಪಘಾತ: ಓರ್ವ ಸಾವು

ಸ್ವಾಗತ್ ಗ್ಯಾರೇಜ್‌ನ ಮುಖ್ಯಸ್ಥ ಬಜಾಲ್ ನಿವಾಸಿ ಪ್ರವೀಣ್ ಫೆರ್ನಾಂಡಿಸ್ (45) ಮೃತ ದುರ್ದೈವಿ. ನಂತೂರಿನಿಂದ ತೊಕ್ಕೊಟ್ಟು ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿಂದ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಎರಡೂ ಕಾರುಗಳಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವೀಣ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅಲ್ಟೋ 800 ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಲ್ಟೋ 800 ಕಾರು ಡಸ್ಟರ್​ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಿದ್ದಿದೆ.

ಇನ್ನು ಕಾರಿನ ಇಂಜಿನ್ ನೂರು ಮೀಟರ್ ದೂರಕ್ಕೆ ಬಿದ್ದಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪಂಪ್ ವೆಲ್ ಮೇಲ್ಸೇತುವೆ ಜ.31 ರಂದು ಲೋಕಾರ್ಪಣೆಗೊಂಡಿದ್ದು, ಆ ಬಳಿಕ ಇಲ್ಲಿ ನಡೆದ ಮೊದಲ ಅಪಘಾತ ಇದಾಗಿದೆ.

ABOUT THE AUTHOR

...view details