ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಚಾಲಕ ಪಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್​ನ ಜೈಲ್ ರೋಡ್ ಸಮೀಪ  ನಡೆದಿದೆ.

By

Published : Jul 31, 2019, 8:25 PM IST

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಕೊಡಿಯಾಲ್ ಬೈಲ್​ನ ಜೈಲ್ ರೋಡ್ ಸಮೀಪ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಕಾರು ರಸ್ತೆಯಲ್ಲಿ ಚಲಿಸುತ್ತಿರುವಾಗಲೇ ಇಂಜಿನ್​ನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಬಳಿಕ ಆ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ವಿಕ್ರಂ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗಿಳಿದಿದ್ದಾರೆ. ಪರಿಣಾಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ಕಾರಿನಲ್ಲಿದ್ದ ಎಸಿ ದುರಸ್ತಿಪಡಿಸಿ ಗ್ಯಾರೇಜ್​​ನಿಂದ ತರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಚಾಲಕ ವಿಕ್ರಂ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details