ಮಂಗಳೂರು:ನಗರದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಅವರನ್ನು ಬೆಂಗಳೂರಿನಿಂದ ಮಂಗಳೂರಿಗೆ ಕರೆತರಲಾಯಿತು.
ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ಮಂಗಳೂರಿಗೆ! - accused aditya rao latest news
ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಅವರನ್ನು ಬೆಂಗಳೂರಿನಿಂದ ಮಂಗಳೂರಿಗೆ ಕರೆತರಲಾಯಿತು.

ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದ ತಂಡ ಇಂದು ಬೆಳಗ್ಗೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿ ಶರಣಾಗತನಾಗಿರುವ ಆರೋಪಿಯನ್ನು ರಾತ್ರಿ 8.30ರವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆತಂದರು. ಟಿಕೆಟ್ ಸಮಸ್ಯೆಯಿಂದ ಮೊದಲ ವಿಮಾನದಲ್ಲಿ ಬೆಳ್ಳಿಯಪ್ಪ ಹಾಗೂ ಇತರ ಇಬ್ಬರು ತನಿಖಾಧಿಕಾರಿಗಳು ಮಂಗಳೂರಿಗೆ ಬಂದಿಳಿದಿದ್ದು, ಆ ಬಳಿಕ ಇಬ್ಬರು ತನಿಖಾಧಿಕಾರಿಗಳು ಬಂದಿದ್ದಾರೆ.
ಬಾಂಬ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿರಿಸಿ ತಪಾಸಣೆ ನಡೆಸುತ್ತಿದ್ದಾರೆ. ಇಂದು ಆದಿತ್ಯ ರಾವ್ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಕರ್ತವ್ಯದಲ್ಲಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕುತೂಹಲದ ವಾತಾವರಣ ಸೃಷ್ಟಿಯಾಗಿದೆ.