ಮಂಗಳೂರು: ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಆರೋಪಿಯನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಈತನ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ.